ಕೊರೋನಾ ಮಹಾಮಾರಿ ಸಮಯದಲ್ಲಿ ವಿವಿಧ ಇಲಾಖೆಗಳ ನಡುವೆ ಸಮನ್ವಯದ ಕೊರತೆ ಕಂಡುಬಂದ ಹಿನ್ನೆಲೆ, ಭವಿಷ್ಯದಲ್ಲಿ ಇಂತಹ ಸಮಸ್ಯೆಗಳು ಉಂಟಾಗದಂತೆ ಈ ಹೊಸ ವ್ಯವಸ್ಥೆಯನ್ನು ರೂಪಿಸಲಾಗಿದೆ. ಸಾಂಕ್ರಾಮಿಕ ರೋಗಗಳ ಹರಡುವಿಕೆ, ಅಗ್ನಿ ಅವಘಡಗಳು, ಪ್ರಕೃತಿ ವಿಕೋಪಗಳು ಹಾಗೂ ಇತರೆ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿಗಳ ಸಂದರ್ಭದಲ್ಲಿ ತ್ವರಿತವಾಗಿ ಪ್ರತಿಕ್ರಿಯಿಸಲು ಮತ್ತು ಪರಿಣಾಮಕಾರಿ ನಿರ್ವಹಣೆ ನಡೆಸಲು ರಾಜ್ಯವನ್ನು ಹೆಚ್ಚು ಸಜ್ಜುಗೊಳಿಸುವುದು ಇದರ ಮುಖ್ಯ ಉದ್ದೇಶವಾಗಿದೆ.
ಬೆಂಗಳೂರಿನಲ್ಲಿ ಆರೋಗ್ಯ ತುರ್ತು ಸೇವೆಗೆ ಹೊಸ ಕಂಟ್ರೋಲ್ ಸೆಂಟರ್ ಆರಂಭ